ಪತ್ರಕರ್ತರ ಮೇಲೆ ತೇಜಸ್ವಿ ಯಾದವ್ ಭದ್ರತಾ ಸಿಬ್ಬಂದಿಯಿಂದ ಗೂಂಡಾಗಿರಿ – News Mirchi

ಪತ್ರಕರ್ತರ ಮೇಲೆ ತೇಜಸ್ವಿ ಯಾದವ್ ಭದ್ರತಾ ಸಿಬ್ಬಂದಿಯಿಂದ ಗೂಂಡಾಗಿರಿ

ಬಿಹಾರದ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಮತ್ತೊಂದು ಕಾರಣಕ್ಕೆ ಸುದ್ದಿಯಾಗಿದ್ದಾರೆ. ಪಾಟ್ನಾದಲ್ಲಿನ ಬಿಹಾರ ಸಚಿವಾಲಯದ ಎದುರು ತೇಜಸ್ವಿ ಯಾದವ್ ಅವರ ಭದ್ರತಾ ಸಿಬ್ಬಂದಿ ಬುಧವಾರ ಪತ್ರಕರ್ತರ ಮೇಲೆ ಹಲ್ಲೆ ನಡೆಸಿದ್ದು ವರದಿಯಾಗಿದೆ.

ಲಾಲೂ ಪ್ರಸಾದ್ ಯಾದವ್ ಮತ್ತು ಅವರ ಕುಟುಂಬ ಸದಸ್ಯರ ವಿರುದ್ಧ ಸಿಬಿಐ ಭ್ರಷ್ಟಾಚಾರ ಪ್ರಕರಣ ದಾಖಲಿಸಿಕೊಂಡ ನಂತರ ರಾಜ್ಯದಲ್ಲಿ ನೆಲೆಸಿರುವ ರಾಜಕೀಯ ಪರಿಸ್ಥಿತಿಗಳ ಕುರಿತು ಚರ್ಚಿಸಲು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆದಿತ್ತು. ಸಭೆಯ ನಂತರ ತೇಜಸ್ವಿ ಯಾದವ್ ಮಾಧ್ಯಮಗಳೊಂದಿಗೆ ಮಾತನಾಡಲು ಮುಂದಾದಾಗ ಈ ಘಟನೆ ನಡೆದಿದೆ.

15 ವರ್ಷಗಳಿಂದ ಕುಟುಂಬದವರಿಂದಲೇ ಕತ್ತಲೆ ಕೋಣೆಯಲ್ಲಿ ಬಂಧಿಯಾಗಿದ್ದ ಮಹಿಳೆ

ಸಚಿವಾಲಯದಿಂದ ಹೊರಗೆ ಬರುತ್ತಿದ್ದಂತೆ, ತೇಜಸ್ವಿ ಯಾದವ್ ಅವರ ಪ್ರತಿಕ್ರಿಯೆಗೆ ಮಾಧ್ಯಮ ಪ್ರತಿನಿಧಿಗಳು ಮುಗಿಬಿದ್ದರು. ಈ ವೇಳೆ ಸ್ಥಳದಲ್ಲಿದ್ದ ಪತ್ರಕರ್ತರನ್ನು ದೂರ ತಳ್ಳುವ ಪ್ರಯತ್ನದಲ್ಲಿ ತೇಜಸ್ವಿ ಯಾದವ್ ಭದ್ರತಾ ಸಿಬ್ಬಂದಿ ಪತ್ರಕರ್ತರ ಮೇಲೆ ಹಲ್ಲೆ ಮಾಡಿದರು. ಈ ವೇಳೆ ಸ್ಥಳದಲ್ಲಿದ್ದ ಪೊಲೀಸರು ಪತ್ರಕರ್ತರು ಮತ್ತು ಯಾದವ್ ಭದ್ರತಾ ಸಿಬ್ಬಂದಿ ನಡುವಿನ ಘರ್ಷಣೆಯನ್ನು ತಪ್ಪಿಸಲು ಮಧ್ಯಪ್ರವೇಶಿಸಿದರು.

ಸಚಿವ ಸಂಪುಟ ಸಭೆಯ ನಂತರ ಮಾತನಾಡಿದ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್, ತಮ್ಮ ಮೇಲಿನ ಭ್ರಷ್ಟಾಚಾರ ಆರೋಪಗಳು ಸಂಪೂರ್ಣ ಸುಳ್ಳು ಎಂದು ಹೇಳಿದ್ದಾರೆ. ನನ್ನ ಮೇಲಿರುವ ಆರೋಪಗಳು 2004 ಕ್ಕೆ ಸಂಬಂಧಸಿದ್ದು, ಆಗ ನನ್ನ ವಯಸ್ಸು ಕೇವಲ 14 ವರ್ಷ, ಆಗ ನನ್ನ ಮೀಸೆಯೂ ಚಿಗುರಿರಲಿಲ್ಲ. ಒಬ್ಬ ಅಪ್ರಾಪ್ತ ಭ್ರಷ್ಟಾಚಾರ ಮಾಡಲು ಸಾಧ್ಯ ಎಂದು ನಂಬುವಿರಾ ಎಂದು ಪ್ರಶ್ನಿಸಿದ್ದಾರೆ.

ಮಹಿಳಾ ಕ್ರಿಕೆಟ್ ನಲ್ಲಿ ಮಿಥಾಲಿ ವಿಶ್ವದಾಖಲೆ

Loading...