ಸಿದ್ದರಾಮಯ್ಯ ಕುರ್ಚಿ ಉಳಿಸಿಕೊಳ್ಳಲು ಹೈಕಮಾಂಡಿಗೆ 1 ಸಾವಿರ ಕೋಟಿ ಸಂದಾಯ: ಯಡಿಯೂರಪ್ಪ

ಬಾಗಲಕೋಟೆ: ತಮ್ಮ ಕುರ್ಚಿ ಉಳಿಸಿಕೊಳ್ಳಲು ಮುಖ್ಯಮಂತ್ರಿ ಹೈಕಮಾಂಡಿಗೆ 1 ಸಾವಿರ ಕೋಟಿ ರೂಪಾಯಿ ಸಂದಾಯ ಮಾಡಿದ್ದಾರೆ ಎಂದು ರಾಜ್ಯಾಧ್ಯಕ್ಷ ಬಿ.ಎಸ್. ಗಂಭೀರ ಆರೋಪ ಮಾಡಿದ್ದಾರೆ. ತಮ್ಮ ಆಪ್ತರಾದ ವಿಧಾನ ಪರಿಷತ್ ಸದಸ್ಯ ಗೋವಿಂದರಾಜು ಅವರ ಮೂಲಕ ಈ ಹಣ ಹೈಕಮಾಂಡ್ ಗೆ ತಲುಪಿಸಿದ್ದಾರೆ ಎಂದು ಹೇಳಿದ್ದಾರೆ.

ಗೋವಿಂದರಾಜು ಅವರ ಮನೆಯಲ್ಲಿ ವಶಪಡಿಸಿಕೊಂಡಿರುವ ಡೈರಿಯಲ್ಲಿ ಹಣ ಸಂದಾಯದ ಉಲ್ಲೇಖವಿದೆ ಎಂದ ಯಡಿಯೂರಪ್ಪ, ಈ ಕುರಿತು ದಾಖಲೆ ಬಿಡುಗಡೆ ಮಾಡಲು ಸಿದ್ದ ಎಂದು ಹೇಳಿದ್ದಾರೆ.

ಕುಷ್ಟಗಿಯಲ್ಲಿ ಸಣ್ಣ ನೀರಾವರಿ ಇಲಾಖೆಯಲ್ಲಿ ಕಾಮಗಾರಿ ನಡೆಸದೆಯೇ ರೂ.43 ಕೋಟಿ ಗುಳುಂ ಮಾಡಿದ್ದಾರೆ. ಈ ಸಾಬೀತಾಗಿದ್ದರೂ ಮುಖ್ಯಮಂತ್ರಿಗಳು ಕಣ್ಮುಚ್ಚಿ ಕುಳಿತಿದ್ದಾರೆ ಎಂದು ಯಡಿಯೂರಪ್ಪ ಆರೋಪಿಸಿದ್ದಾರೆ.

Related News

loading...
Comments (wait until it loads)
Loading...
class="clear">

News Mirchi is Stephen Fry proof thanks to caching by WP Super Cache