ಚುನಾವಣೆಗೆ ಟಿಕೆಟ್ ಸಿಕ್ಕ ಖುಷಿಯಲ್ಲಿ ಹೃದಯಾಘಾತ

ಆಗ್ರಾ: ವಿಧಾನಸಭೆ ಚುನಾವಣೆಗೆ ಟಿಕೆಟ್ ಸಿಕ್ಕ ಸಂತೋಷದಲ್ಲಿ ಸಮಾಜವಾದಿ ಪಕ್ಷದ ಮುಖಂಡನೊಬ್ಬ ಹೃದಯಾಘಾತ ದಿಂದ ಸಾವನ್ನಪ್ಪಿದ್ದಾರೆ. ಎರಡು ದಿನಗಳ ಹಿಂದಷ್ಟೇ ಪಕ್ಷದ ನಾಯಕ ಮುಲಾಯಂ ಸಿಂಗ್ ಯಾದವ್ ಚುನಾವಣೆಗೆ ಅಭ್ಯರ್ಥಿಗಳನ್ನು ಪ್ರಕಟಿಸಿದ್ದರು. ಅದರಲ್ಲಿ ಚಂದ್ರಸೇನ್ ತಪ್ಲು(45) ಎಂಬಾತನ ಹೆಸರೂ ಇತ್ತು.

ಟಿಕೆಟ್ ಪ್ರಕಟವಾದ ನಂತರ ಸಂತೋಷಗೊಂಡ ಚಂದ್ರಸೇನ್, ಸಂಭ್ರಮಾಚರಣೆಯಲ್ಲಿ ಮುಳುಗಿದ್ದರು. ಎಲ್ಲರೊಂದಿಗೆ ಸೇರಿ ಪಾರ್ಟಿ ಮಾಡಿದರು. ಮುಲಾಯಂಸಿಂಗ್ ಯಾದವ್ ರವರಿಗೆ ಧನ್ಯವಾದಗಳನ್ನು ಅರ್ಪಿಸಿದ ಅವರು, ಸೀಟು ಸಿಕ್ಕಿದ ಸಂತೋಷವನ್ನು ಎಲ್ಲರೊಂದಿಗೆ ಹಂಚಿಕೊಂಡರು.

ಆದರೆ ಗುರುವಾರ ಬೆಳಗ್ಗೆ 8 ಗಂಟೆ ಸಮಯದಲ್ಲಿ ತನಗೆ ಎದೆ ನೋವು ಎಂದು ಹೇಳಿದ್ದರಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಅಲ್ಲಿಂದ ಗುರ್ಗಾವ್ ನ ಮೇದಾಂತ ಆಸ್ಪತ್ರೆಗೆ ಕರೆದೊಯ್ಯುವಂತೆ ವೈದ್ಯರು ಸಲಹೆ ನೀಡಿದರು. ಹೀಗಾಗಿ ಅಲ್ಲಿಂದ ಮೇದಾಂತ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಟೋಲ್ ಪ್ಲಾಜಾ ಒಂದರ ಬಳಿ ಕೊನೆಯುಸಿರೆಳೆದಿದ್ದಾರೆ.

Related News

Comments (wait until it loads)
Loading...
class="clear">

News Mirchi is Stephen Fry proof thanks to caching by WP Super Cache