ರಾಷ್ಟ್ರಪತಿ ಅಭ್ಯರ್ಥಿಗೆ ಬೆಂಬಲ: ಅಪ್ಪ ಮಕ್ಕಳ ವಿಭಿನ್ನ ನಿಲುವು?

ರಾಷ್ಟ್ರಪತಿ ಚುನಾವಣೆಯಲ್ಲಿ ಯಾವ ಪಕ್ಷದ ಅಭ್ಯರ್ಥಿಯನ್ನು ಬೆಂಬಲಿಸಬೇಕು ಎಂಬ ವಿಷಯದಲ್ಲಿ ಸಮಾಜವಾದಿ ಪಕ್ಷದಲ್ಲಿ ಎರಡು ಬಣಗಳಾಗುವ ಸಾಧ್ಯತೆಗಳು ಕಾಣಿಸುತ್ತಿವೆ. ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಮತ್ತು ಅವರ ತಂದೆ, ಹಾಗೂ ಪಕ್ಷದ ಹಿರಿಯ ಮುಖಂಡ ಮುಲಾಯಂ ಸಿಂಗ್ ಯಾದವ್ ಅವರು ಈ ವಿಷಯದಲ್ಲಿ ಭಿನ್ನ ನಿಲುವು ತಳೆದಿದ್ದಾರೆ ಎನ್ನಲಾಗುತ್ತಿದೆ.

ರಾಷ್ಟ್ರಪತಿ ಚುನಾವಣಾ ಫಲಿತಾಂಶದಿಂದ ಪಕ್ಷದ ಮೇಲೆ ಯಾವುದೇ ಪ್ರಭಾವ ಬೀರದಿದ್ದರೂ, ಅಪ್ಪ ಮಕ್ಕಳ ನಡುವಿನ ವೈಮನಸ್ಸು ಮತ್ತಷ್ಟು ಹೆಚ್ಚಾಗಲಿದೆ ಎನ್ನಲಾಗುತ್ತಿದೆ.

ಒಂದೇ ದಿನದಲ್ಲಿ 1 ಲಕ್ಷ ಮೊಬೈಲ್ ಮಾರಾಟ… ಯಾವುದಿದು?

ಬಿಜೆಪಿಯಿಂದ ರಾಮನಾಥ್ ಕೋವಿಂದ್ ಅವರ ಹೆಸರನ್ನು ರಾಷ್ಟ್ರಪತಿ ಅಭ್ಯರ್ಥಿಯಾಗಿ ಆಯ್ಕೆ ಮಾಡುತ್ತಿದ್ದಂತೆ, ಜುಲೈ 20 ರಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆಹ್ವಾನಿಸಿದ್ದ ಔತಣಕೂಟಕ್ಕೆ ಮುಲಾಯಂ ಸಿಂಗ್ ಯಾದವ್ ಹಾಜರಾಗಿದ್ದರು. ರಾಮನಾಥ್ ಕೋವಿಂದ್ ಉತ್ತಮ ಆಯ್ಕೆ, ಅವರೊಂದಿಗೆ ನನಗೆ ತುಂಬಾ ದಿನಗಳ ಒಡನಾಟವಿದೆ, ಬಿಜೆಪಿ ಸಮರ್ಥ ಅಭ್ಯರ್ಥಿಯನ್ನೇ ಆಯ್ಕೆ ಮಾಡಿದ್ದಾರೆ ಎಂದು ಮುಲಾಯಂ ಹೇಳಿದ್ದರು. ಹೀಗಾಗಿ ಬಿಜೆಪಿ ಅಭ್ಯರ್ಥಿಯನ್ನು ಮುಲಾಯಂ ಸಿಂಗ್ ಅವರು ಬೆಂಬಲಿಸುತ್ತಾರೆ ಎಂದು ಸಹಜವಾಗಿಯೇ ವಿಶ್ಲೇಶಿಸಲಾಗಿತ್ತು. ಅದೇ ಔತಣಕೂಟಕ್ಕೆ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಗೈರಾಗಿದ್ದರು.

ಪ್ರತಿ 10 ರಲ್ಲಿ 6 ಡ್ರೈವಿಂಗ್ ಲೈಸೆನ್ಸ್ ಗಳಿಗೆ ಪರೀಕ್ಷೆಯೇ ಇಲ್ಲ!

ಶುಕ್ರವಾರ ಅಖಿಲೇಶ್ ಯಾದವ್ ಅವರನ್ನು ಭೇಟಿ ಮಾಡಿದ ಕಾಂಗ್ರೆಸ್ ಪಕ್ಷದ ರಾಷ್ಟ್ರಪತಿ ಅಭ್ಯರ್ಥಿ ಮೀರಾ ಕುಮಾರ್, ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸುವಂತೆ ಮನವಿ ಮಾಡಿದ್ದರು. ನಂತರ ಜ್ಯಾತ್ಯಾತೀತ ತತ್ವಗಳನ್ನು ಪ್ರತಿನಿಧಿಸುವ ಮೀರಾ ಕುಮಾರ್ ಅವರನ್ನು ಬೆಂಬಲಿಸುವಂತೆ ಅಖಿಲೇಶ್ ಯಾದವ್ ತಮ್ಮ ಪಕ್ಷದ ಶಾಸಕರಿಗೆ ಸೂಚಿಸಿದ್ದಾರೆ.

ಮತ್ತೊಂದೆಡೆ ಬಿಜೆಪಿ ಅಭ್ಯರ್ಥಿಗೆ ತಾವು ಸೇರಿದಂತೆ ಕೆಲವು ಶಾಸಕರು ಬೆಂಬಲಿಸುವುದಾಗಿ ಸಮಾಜವಾದಿ ಪಕ್ಷದ ಶಿವಪಾಲ್ ಯಾದವ್ ಘೋಷಿಸಿದ್ದಾರೆ.