ಪ್ರಚೋದನಕಾರಿ ಭಾಷಣ, ಮುತಾಲಿಕ್ ವಿರುದ್ಧ ದೂರು ದಾಖಲು

ಬೆಂಗಳೂರು: ಉಡುಪಿಯ ಶ್ರೀಕೃಷ್ಣ ಮಠದಲ್ಲಿ ಮುಸ್ಲಿಮರಿಗೆ ಇಫ್ತಾರ್ ಕೂಟ ಆಯೋಜಿಸಿದ್ದನ್ನು ವಿರೋಧಿಸಿ ನಡೆಸಿದ ಪ್ರತಿಭಟನೆ ಸಂದರ್ಭದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದರೆಂಬ ಆರೋಪದ ಮೇಲೆ ಶ್ರೀರಾಮ ಸೇನೆ ಮುಖಯಸ್ಥ ಪ್ರಮೋದ್ ಮುತಾಲಿಕ್ ಅವರ ವಿರುದ್ಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್ ದಾಖಲಾಗಿದೆ.

ಕೃಷ್ಣ ಮಠದಲ್ಲಿ ಇಫ್ತಾರ್ ಆಯೋಜಿಸಿದ್ದ ಪೇಜಾವರ ಶ್ರೀಗಳ ವಿರುದ್ಧ ಜುಲೈ 2 ರಂದು ಮೌರ್ಯ ಸರ್ಕಲ್ ನಲ್ಲಿ ಪ್ರತಿಭಟನೆ ನಡೆಸಿದ ಪ್ರಮೋದ್ ಮುತಾಲಿಕ್, ಇನ್ನು ಮುಂದೆ ಯಾವುದೇ ದೇವಾಲಯದಲ್ಲಿ ಇಫ್ತಾರ್ ಮತ್ತು ನಮಾಜ್ ನಡೆಸಲು ಅವಕಾಶ ಮಾಡಿಕೊಟ್ಟರೆ, ರಕ್ತ ಹರಿಸುತ್ತೇವೆ ಎಂದು ಹೇಳಿದ್ದರು.