ಯೋಗಿಯನ್ನು ಭೇಟಿ ಮಾಡಿದ ಶ್ರೀ ಶ್ರೀ ರವಿಶಂಕರ್ – News Mirchi

ಯೋಗಿಯನ್ನು ಭೇಟಿ ಮಾಡಿದ ಶ್ರೀ ಶ್ರೀ ರವಿಶಂಕರ್

ಲಕ್ನೋ: ಆರ್ಟ್ ಆಫ್ ಲಿವಿಂಗ್ ನ ಶ್ರೀ ಶ್ರೀ ರವಿಶಂಕರ್ ಬುಧವಾರ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಭೇಟಿ ಮಾಡಿದರು. ಲಕ್ನೋದಲ್ಲಿನ ಮುಖ್ಯಮಂತ್ರಿಗಳ ಅಧಿಕೃತ ನಿವಾಸದಲ್ಲಿ ಈ ಭೇಟಿ ನಡೆಯಿತು. ಭೇಟಿ ಸಂದರ್ಭದಲ್ಲಿ ಅಯೋಧ್ಯೆ ರಾಮಮಂದಿರ ವಿವಾದ ಚರ್ಚೆಯಾಯಿತು ಎನ್ನಲಾಗುತ್ತಿದೆ. ರಾಮ ಜನ್ಮಭೂಮಿ ವಿವಾದ ಬಗೆಹರಿಸಲು ಮಧ್ಯಸ್ಥಿಕೆ ವಹಿಸಲು ಸಿದ್ಧ ಎಂದು ಶ್ರೀ ಶ್ರೀ ರವಿಶಂಕರ್ ಸ್ವಯಂ ಪ್ರೇರಿತರಾಗಿ ಮುಂದೆ ಬಂದಿದ್ದರು. ಈ ಸಂಬಂಧ ಗೃಹ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡುವ ಇಂಗಿತವನ್ನು ಅವರು ವ್ಯಕ್ತಪಡಿಸಿದ್ದರು. ರವಿಶಂಕರ್ ಅವರು ಗುರುವಾರ ಅಯೋಧ್ಯೆಗೆ ಭೇಟಿ ನೀಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಯೋಗಿ ಆದಿತ್ಯನಾಥ್ ಅವರನ್ನು ಭೇಟಿ ಮಾಡಿದರು.

Get Latest updates on WhatsApp. Send ‘Add Me’ to 8550851559

Loading...