ಚುನಾವಣೆಗೆ ಸ್ಪರ್ಧಿಸಲ್ಲ, ಸಕ್ರಿಯ ರಾಜಕಾರಣ ತೊರೆಯಲ್ಲ : ಶ್ರೀನಿವಾಸ್ ಪ್ರಸಾದ್ |News Mirchi

ಚುನಾವಣೆಗೆ ಸ್ಪರ್ಧಿಸಲ್ಲ, ಸಕ್ರಿಯ ರಾಜಕಾರಣ ತೊರೆಯಲ್ಲ : ಶ್ರೀನಿವಾಸ್ ಪ್ರಸಾದ್

ನಂಜನಗೂಡು ವಿಧಾನಸಭಾ ಉಪಚುನಾವಣೆಯಲ್ಲಿ ಸೋಲುಂಡ ನಂತರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ಪ್ರತಿಕ್ರಿಯಿಸಿದ್ದು, ತಾವು ಚುನಾವಣಾ ರಾಜಕೀಯ ನಿವೃತ್ತಿ ಪಡೆಯುತ್ತಿರುವುದಾಗಿ ಘೋಷಿಸಿದ್ದಾರೆ. ಆದರೆ ಸಕ್ರಿಯ ರಾಜಕಾರಣದಲ್ಲಿ ಮುಂದುವರೆಯುತ್ತೇನೆ ಎಂದು ಹೇಳಿದ್ದಾರೆ. 13 ಬಾರಿ ಚುನಾವಣೆ ಎದುರಿಸಿದ್ದೇನೆ, ಇದೇ ನನ್ನ ಕೊನೇ ಚುನಾವಣೆ ಎಂದು ಈ ಹಿಂದೆಯೇ ಹೇಳಿದ್ದೆ, ಆ ಮಾತಿಗೆ ನಾನು ಬದ್ಧನಾಗಿದ್ದೇನೆ ಎಂದು ಹೇಳಿದ್ದಾರೆ. ಕಾಂಗ್ರೆಸ್ ತೊರೆದಿದ್ದಕ್ಕೆ ನನಗೆ ಪಶ್ಚಾತ್ತಾಪವಿಲ್ಲ, ರಾಜಕೀಯ ಜೀವನದಲ್ಲಿ ಇವೆಲ್ಲಾ ನೋಡಿದ್ದೇನೆ ಎಂದರು.

ಚುನಾವಣೆಯಲ್ಲಿ ಗೆದ್ದ ಅಭ್ಯರ್ಥಿಗೆ ಅಭಿನಂದನೆ ಸಲ್ಲಿಸಿದ ಶ್ರೀನಿವಾಸ್ ಪ್ರಸಾದ್, ಜನರ ತೀರ್ಪಿಗೆ ತಲೆಬಾಗುವುದಾಗಿ ಹೇಳಿದರು. ಕೊನೆಯ ಮೂರು ದಿನಗಳಲ್ಲಿ ಕಾಂಗ್ರೆಸ್ ಹಣದ ಹೊಳೆಯೇ ಹರಿಸಿದ್ದು, ಚುನಾವಣೆಯ ಪಾವಿತ್ರ್ಯತೆಯನ್ನೇ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಳು ಮಾಡಿದ್ದಾರೆ ಎಂದು ಆರೋಪಿಸಿದರು.

  • No items.

Loading...
loading...
error: Content is protected !!