ಕೈ ಬಿಟ್ಟು ಕಮಲ ಹಿಡಿಯಲಿದ್ದಾರೆ ಶ್ರೀನಿವಾಸ್ ಪ್ರಸಾದ್ |News Mirchi

ಕೈ ಬಿಟ್ಟು ಕಮಲ ಹಿಡಿಯಲಿದ್ದಾರೆ ಶ್ರೀನಿವಾಸ್ ಪ್ರಸಾದ್

ಮೈಸೂರು: ಇತ್ತೀಚೆಗಷ್ಟೇ ಕಾಂಗ್ರೆಸ್ ‌ಗೆ ರಾಜೀನಾಮೆ ನೀಡಿದ್ದ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ಶೀಘ್ರದಲ್ಲೇ ಬಿಜೆಪಿ ಸೇರುವ ಸಾಧ್ಯತೆ ಇದೆ. ಬಿಜೆಪಿ ಹಿರಿಯ ನಾಯಕ ಎಲ್‌ಕೆ ಅಡ್ವಾಣಿ, ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಕೇಂದ್ರ ಗೃಹಸಚಿವ ರಾಜನಾಥ್ ಸಿಂಗ್ ಪಕ್ಷ ಸೇರ್ಪಡೆ ಕುರಿತಂತೆ ಶ್ರೀನಿವಾಸ್ ಪ್ರಸಾದ್ ಅವರ ಜೊತೆ ಮಾತುಕತೆ ನಡೆಸಿದ್ದು, ಪಕ್ಷಕ್ಕೆ ಆಹ್ವಾನಿಸಿದ್ದಾರೆ ಎನ್ನಲಾಗಿದೆ.

ತಮ್ಮ ಸುಧೀರ್ಘ ರಾಜಕೀಯ ಜಿವನದುದ್ದಕ್ಕೂ ತಮ್ಮನ್ನು ಬೆಂಬಲಿಸಿದ ನಂಜನಗೂಡು ಜನತೆಗೆ ಕೃತಜ್ಞತೆಗಳನ್ನು ಅರ್ಪಿಸಲು ಸಮಾವೇಶವೊಂದನ್ನು ಮಾಜಿ ಸಚಿವರು ಹಮ್ಮಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ. ಬಿಜೆಪಿ ರಾಷ್ಟ್ರೀಯ ನಾಯಕರ ಜೊತೆ ಚರ್ಚಿಸಿ ಬಿಜೆಪಿ ಸೇರ್ಪಡೆ ಕುರಿತು ದೀಪಾವಳಿ ನಂತರ ಘೋಷಣೆ ಮಾಡುವುದು ಖಚಿತ ಎಂದು ನಂಬಲರ್ಹ ಮೂಲಗಳು ಹೇಳುತ್ತಿವೆ.

ತಮ್ಮ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ನಡೆಯುವ ಉಪಚುನಾವಣೆಯಲ್ಲಿ ಸ್ಪರ್ಧಿಸುವ ತಮಗೆ ಕಾಂಗ್ರೆಸ್ ವಿರೋಧಿಸುವ ಪಕ್ಷಗಳ ಬೆಂಬಲ ಯಾಚಿಸಲಿದ್ದಾರೆ ಎನ್ನಲಾಗುತ್ತಿದೆ.

Loading...
loading...
error: Content is protected !!