ಬಡ್ತಿಯಲ್ಲಿ ಮೀಸಲಾತಿ: ಸುಪ್ರೀಂ ಗೆ ಸರ್ಕಾರದ ಮರುಪರಿಶೀಲನಾ ಅರ್ಜಿ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸರ್ಕಾರಿ ನೌಕರರಿಗೆ ಬಡ್ತಿಯಲ್ಲಿ ಮೀಸಲಾತಿ ನೀಡುತ್ತಿರುವ ಸರ್ಕಾರದ ಕ್ರಮವನ್ನು ಸುಪ್ರೀಂಕೋರ್ಟ್ ರದ್ದುಗೊಳಿಸಿದ್ದನ್ನು ಮರುಪರಿಶೀಲಿಸುವಂತೆ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಗೆ ಮನವಿ ಮಾಡಲಿದೆ. ಅಲ್ಲಿಯವರೆಗೂ ಬಡ್ತಿ ಪ್ರಕ್ರಿಯೆ ಸ್ಥಗಿತಗೊಳಿಸಲು ಸಿದ್ದರಾಮಯ್ಯ ಸರ್ಕಾರ ನಿರ್ಧರಿಸಿದೆ. ಬಡ್ತಿಯಲ್ಲಿ ಮೀಸಲಾತಿ ರದ್ದುಗೊಳಿಸಿದರೆ ಈಗಾಗಲೇ ಮೀಸಲಾತಿ ಅಧಾರದ ಮೇಲೆ ಬಡ್ತಿ ಪಡೆದಿರುವ ಸುಮಾರು 10 ಸಾವಿರ ಸರ್ಕಾರಿ ನೌಕರರಿಗೆ ಅನ್ಯಾಯವಾಗುತ್ತದೆ ಮತ್ತು ಯಾಕಾಗಿ ಬಡ್ತಿಯಲ್ಲಿ ಮೀಸಲಾತಿ ನೀಡಲಾಗುತ್ತಿದೆ ಎಂಬುದನ್ನು ಸರ್ಕಾರ ನ್ಯಾಯಾಲಯಕ್ಕೆ ಮನವರಿಕೆ ಮಾಡಿಕೊಡಲಿದೆ.

ನೇಮಕಾತಿಯಲ್ಲಷ್ಟೇ ಮೀಸಲಾತಿ ಅನ್ವಯವಾಗುತ್ತದೆ ಹೊರತು ಬಡ್ತಿಗಲ್ಲ ಎಂದು ಪವಿತ್ರಾ ಎಂಬುವವರು 2011 ರಲ್ಲಿ ಸುಪ್ರೀಂ ಮೆಟ್ಟಿಲು ಹತ್ತಿದ್ದರು. ಸರ್ಕಾರದ ಬಡ್ತಿಯಲ್ಲಿ ಮೀಸಲಾತಿ ಕ್ರಮವನ್ನು ಪ್ರಶ್ನಿಸಿದ್ದರು. ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್, ಬಡ್ತಿಯಲ್ಲಿ ಮಿಸಲಾತಿ ನೀಡುವ ಅಧಿಕಾರ ರಾಜ್ಯ ಸರ್ಕಾರಕ್ಕಿಲ್ಲ ಎಂದು ಹೇಳಿದ್ದು, ಮೀಸಲಾತಿ ಕ್ರಮವನ್ನು ರದ್ದುಗೊಳಿಸಿ, ಈಗಾಗಲೆ ಬಡ್ತಿ ಪಡೆದವರಿಗೆ ಹಿಂಬಡ್ತಿ ನೀಡುವಂತೆ ಸರ್ಕಾರಕ್ಕೆ ಸೂಚಿಸಿತ್ತು.

Loading...

Leave a Reply

Your email address will not be published.

error: Content is protected !!