ಸ್ಟೀಲ್ ಬ್ರಿಡ್ಜ್ ನಿರ್ಮಾಣಕ್ಕೆ ಕಮೀಷನ್, ತನಿಖೆಗೆ ರಾಜೀವ್ ಚಂದ್ರಶೇಖರ್ ಒತ್ತಾಯ – News Mirchi

ಸ್ಟೀಲ್ ಬ್ರಿಡ್ಜ್ ನಿರ್ಮಾಣಕ್ಕೆ ಕಮೀಷನ್, ತನಿಖೆಗೆ ರಾಜೀವ್ ಚಂದ್ರಶೇಖರ್ ಒತ್ತಾಯ

ಬೆಂಗಳೂರು: ಬೆಂಗಳೂರಿನಲ್ಲಿ ಸರ್ಕಾರ ನಿರ್ಮಿಸಲು ಉದ್ದೇಶಿಸಿರುವ ಸ್ಟೀಲ್ ಫ್ಲೈಓವರ್ ಗೆ ಸರ್ಕಾರ ಕಮೀಷನ್ ಪಡೆದಿದೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು ತನಿಖೆ ನಡೆಸುವಂತೆ ಲೋಕಾಯುಕ್ತರಿಗೆ ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್ ಮನವಿ ಮಾಡಿದ್ದಾರೆ.  ಅಷ್ಟೇ ಅಲ್ಲದೆ ಇತ್ತೀಚೆಗೆ ವಿಧಾನಪರಿಷತ್ ಸದಸ್ಯ ಗೋವಿಂದರಾಜು ಅವರ ನಿವಾಸದಲ್ಲಿ ಆದಾಯ ತೆರಿಗೆ ಅಧಿಕಾರಿಗಳು ವಶಪಡಿಸಿಕೊಂಡ ಡೈರಿ ಮತ್ತು ಅದರಲ್ಲಿ ಕಾಂಗ್ರೆಸ್ ಹೈಕಮಾಂಡಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಣ ಸಂದಾಯ ಮಾಡಿರುವ ವಿವರಗಳಿವೆ ಎಂಬ ಆರೋಪಗಳ ಬಗ್ಗೆಯೂ ತನಿಖೆ ನಡೆಸುವಂತೆ ಮನವಿ ಮಾಡಿದ್ದಾರೆ.

 

Loading...

Leave a Reply

Your email address will not be published.