ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಪ್ರಶ್ನಿಸಿದ ಅರ್ಜಿ ಅಂಗೀಕರಿಸಿದ ಸುಪ್ರೀಂ – News Mirchi

ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಪ್ರಶ್ನಿಸಿದ ಅರ್ಜಿ ಅಂಗೀಕರಿಸಿದ ಸುಪ್ರೀಂ

ಜಮ್ಮೂ ಕಾಶ್ಮೀರಕ್ಕೆ ಸಂವಿಧಾನದ 370ನೇ ವಿಧಿಯಡಿ ನೀಡಿರುವ ವಿಶೇಷ ಸ್ಥಾನಮಾನದ ನ್ಯಾಯಬದ್ಧತೆಯನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆಗೆ ಅಂಗೀಕರಿಸಿದೆ. ಈ ಸಂಬಂಧ ಕೇಂದ್ರ ಸರ್ಕಾರದ ಅಭಿಪ್ರಾಯ ಬಯಸಿ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

ಜಮ್ಮೂ ಕಾಶ್ಮೀರಕ್ಕೆ ನೀಡಿರುವ ವಿಶೇಷ ಸಂವಿಧಾನ ಅಕ್ರಮ ಎಂದು ಘೋಷಿಸಬೇಕು ಎಂದು ಸುಪ್ರೀಂ ಗೆ ಸಲ್ಲಿಕೆಯಾಗಿರುವ ಅರ್ಜಿಯಲ್ಲಿ ಮನವಿ ಮಾಡಲಾಗಿದೆ. ಸಂವಿಧಾನದ 370 ನೇ ವಿಧಿಯು ಜಮ್ಮೂ ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದು, ಈ ವಿಧಿಯನ್ನು ರದ್ದುಗೊಳಿಸುವಂತೆ ಹಲವಾರು ವರ್ಷಗಳಿಂದ ಬಲವಾದ ಒತ್ತಾಯಗಳು ಕೇಳಿಬರುತ್ತಿವೆ.

ನಿಮ್ಮ ಉಗುರಿನ ಆಕಾರದಿಂದ ನಿಮ್ಮ ವ್ಯಕ್ತಿತ್ವ ತಿಳಿಯಿರಿ

ಜನವರಿ 2017 ರಲ್ಲಿ ಈ ಕುರಿತು ಮಾತನಾಡಿದ್ದ ಜಮ್ಮೂ ಕಾಶ್ಮೀರ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ, ಆರ್ಟಿಕಲ್ 370 ಯನ್ನು ದುರ್ಬಲಗೊಳಿಸುವ ಪ್ರಯತ್ನಗಳು ದೇಶ ವಿರೋಧಿ ಕ್ರಮವಾಗುತ್ತದೆ ಎಂದು ಎಚ್ಚರಿಸಿದ್ದರು.

ಸಂವಿಧಾನದ 35ಎ ವಿಧಿ ಕುರಿತು ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ 370 ಕುರಿತೂ ಅರ್ಜಿ ಸಲ್ಲಿಕೆಯಾಗಿದೆ. ಸಂವಿಧಾನದ 35ಎ ವಿಧಿಯು ಅಲ್ಲಿನ ಶಾಸಕಾಂಗಕ್ಕೆ ಯಾರನ್ನಾದರೂ ತಮ್ಮ ರಾಜ್ಯ ಶಾಶ್ವತ ನಿವಾಸಿಗಳೆಂದು ಪರಿಗಣಿಸಿ ವಿಶೇಷ ಸವಲತ್ತು ಹಕ್ಕುಗಳನ್ನು ನೀಡುವ ಅಧಿಕಾರ ನೀಡುತ್ತದೆ.

Loading...