ಕುಮಾರಸ್ವಾಮಿ, ಧರಮ್ ಸಿಂಗ್ ವಿರುದ್ಧ ಎಸ್‌ಐಟಿ ತನಿಖೆಗೆ ಸುಪ್ರೀಂ ಆದೇಶ

ಮೀಸಲು ಅರಣ್ಯದಲ್ಲಿ ಅಕ್ರಮ ಗಣಿಗಾರಿಕೆಗೆ ಅನುಮತಿ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಮತ್ತು ಧರಮ್ ಸಿಂಗ್ ಅವರಿಗೆ ಸುಪ್ರೀಂ ಕೋರ್ಟ್ ನಲ್ಲಿ ಹಿನ್ನಡೆಯಾಗಿದೆ. ಇವರಿಬ್ಬರ ವಿರುದ್ಧ ಎಸ್.ಐ.ಟಿ ತನಿಖೆ ನಡೆಸುವಂತೆ ಸುಪ್ರೀಂ ಕೋರ್ಟ್ ನ ಪಿ.ಸಿ.ಘೋಷ್ ಮತ್ತು ಆರ್.ಎಫ್.ನಾರಿಮನ್ ಅವರ ದ್ವಿಸದಸ್ಯ ಪೀಠ ಕರ್ನಾಟಕ ಪೊಲೀಸರಿಗೆ ಆದೇಶಿಸಿದೆ. ಎಸ್.ಎಂ ಕೃಷ್ಣ ರವರ ವಿರುದ್ಧದ ತನಿಖೆಗೆ 2012 ರಲ್ಲಿ ನೀಡಿದ್ದ ತಡೆಯಾಜ್ಞೆಯನ್ನು ಮುಂದುವರೆಸಿ ರಿಲೀಫ್ ನೀಡಿದೆ.

ಅರ್‌ಟಿಐ ಕಾರ್ಯಕರ್ತ ಟಿ.ಜೆ.ಜಾರ್ಜ್ ದಾಖಲಿಸಿದ್ದ ಪಿಟೀಷನ್ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಈ ಆದೇಶ ನೀಡಿದ್ದು, ಮೂರು ತಿಂಗಳೊಳಗೆ ವರದಿ ಸಲ್ಲಿಸಲು ಎಸ್.ಐ.ಟಿ ಗೆ ಸುಪ್ರೀಂ ಸೂಚಿಸಿದೆ.