ಪ್ರತಿ ರಾಜ್ಯದಲ್ಲಿ ಗೋಹತ್ಯೆ ನಿಷೇಧಕ್ಕೆ ಸುಪ್ರೀಂ ನಕಾರ – News Mirchi
We are updating the website...

ಪ್ರತಿ ರಾಜ್ಯದಲ್ಲಿ ಗೋಹತ್ಯೆ ನಿಷೇಧಕ್ಕೆ ಸುಪ್ರೀಂ ನಕಾರ

ಎಲ್ಲಾ ರಾಜ್ಯಗಳಲ್ಲೂ ಗೋಹತ್ಯೆಯನ್ನು ಸಂಪೂರ್ಣವಾಗಿ ನಿಷೇಧಿಸಬೇಕು ಎಂದು ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿಯ ಅರ್ಜಿ (ಪಿಐಎಲ್)ಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾಗೊಳಿಸಿದೆ. ಗೋ ಹತ್ಯೆಗೆ ಸಂಬಂಧಿಸಿದಂತೆ ರಾಜ್ಯದ ಕಾನೂನುಗಳಲ್ಲಿ ನ್ಯಾಯಾಲಯ ಮಧ್ಯಪ್ರವೇಶಿಸುವುದಿಲ್ಲ ಎಂದು ಹೇಳಿದೆ.

ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಕೆಲ ರಾಜ್ಯಗಳು ಗೋಹತ್ಯೆ ನಿಷೇಧಿಸಬಹುದು, ಕೆಲವು ನಿಷೇಧಿಸದೇ ಇರಬಹುದು, ನಾವು ರಾಜ್ಯಗಳ ಕಾನೂನುಗಳಲ್ಲಿ ಹಸ್ತಕ್ಷೇಪ ನಡೆಸುವುದಿಲ್ಲ ಎಂದು ಹೇಳಿತು. ಗೋಹತ್ಯೆಗೆ ಸಂಬಂಧಿಸಿದಂತೆ ಏಕರೂಪ ನೀತಿ ಜಾರಿಗೆ ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನೂ ಕೋರ್ಟ್ ತಿರಸ್ಕರಿಸಿತು.

English Summary: The Supreme Court on friday dismissed the PIL seeking a complete ban on cow slaughter in all states, and said that the court is not going to interfere into the state laws and regulations on the killing of cattle.

Contact for any Electrical Works across Bengaluru

Loading...

Leave a Reply

Your email address will not be published.

error: Content is protected !!