ಹಳೆಯ ನೋಟು ರದ್ದು: ತಡೆ ನೀಡಲು ಸುಪ್ರೀಂ ನಕಾರ

ನವದೆಹಲಿ: ಕೇಂದ್ರ ಸರ್ಕಾರ 500, 1000 ಮುಖಬೆಲೆಯ ನೋಟುಗಳನ್ನು ರದ್ದುಪಡಿಸಿ ತೆಗೆದುಕೊಂಡ ತೀರ್ಮಾನಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ನೋಟು ರದ್ದು ತೀರ್ಮಾನ ವಿರೋಧಿಸಿ ದಾಖಲಾದ ಪಿಟೀಷನ್‌ಗಳ ವಿಚಾರಣೆಯನ್ನು ಮಂಗಳವಾರ ಸುಪ್ರೀಂ ಕೋರ್ಟ್ ನಡೆಸಿತು. ದಾಖಲಾದ ಪಿಟೀಷನ್ ಗಳಿಗೆ ಕೌಂಟರ್ ಪಿಟೀಷನ್ ದಾಖಲಿಸುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಸೂಚಿಸಿದೆ.

ವ್ಯಾಸ ರಚಿತ ಮಹಾಭಾರತ

ನೋಟು ರದ್ದು ತೀರ್ಮಾನದಿಂದ ಜನರಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕೆಂದು ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಜನರ ಕಷ್ಟಗಳ ನಿವಾರಣೆಗಾಗಿ ಸರ್ಕಾರ ಏನು ಕ್ರಮ ಕೈಗೊಂಡಿದೆ ಎಂದು ಪ್ರಶ್ನಿಸಿತು.

ನೋಟು ರದ್ದುಗೊಳಿಸಿದ್ದರಿಂದ ಕಪ್ಪು ಹಣ ಹೊಂದಿರುವವರಿಗೆ ತೀವ್ರ ನಷ್ಟವಾಗಿದೆ ಎಂದು ಅಟಾರ್ನಿ ಜನರಲ್ ಸುಪ್ರೀಂ ಕೋರ್ಟ್ ಗಮನಕ್ಕೆ ತಂದರು. ಕಪ್ಪು ಹಣದ ವಿರುದ್ಧ ಕೇಂದ್ರ ಸರ್ಜಿಕಲ್ ದಾಳಿ ನಡೆಸಿದೆ ಎಂದು ಅವರು ಹೇಳಿದರು. ಅಟಾರ್ನಿ ಜನರಲ್ ವಾದಕ್ಕೆ ಸುಪ್ರೀಂ ಕೋರ್ಟ್ ದನಿಗೂಡಿಸಿತು.

Related Post

error: Content is protected !!