ಕೋರ್ಟ್ ಗೆ ಹೋಗುವ ಮುನ್ನ ಮಾಯಾವತಿ ಆಸ್ಪತ್ರೆಗೆ ಹೋಗಲಿ

ಉತ್ತರ ಪ್ರದೇಶ ಚುನಾವಣೆಯಲ್ಲಿ ಎಲೆಕ್ಟ್ರಾನಿಕ್ ಮತಯಂತ್ರಗಳನ್ನು ದುರ್ಬಳಕೆ ಮಾಡಿಕೊಂಡು ಬಿಜೆಪಿ ಗೆದ್ದಿದೆ ಎಂಬ ಆರೋಪಗಳಿಗೆ ಉತ್ತರ ಪ್ರದೇಶ ಭಾರತೀಯ ಜನತಾ ಪಕ್ಷದ ಅಧ್ಯಕ್ಷ ಕೇಶವ ಪ್ರಸಾದ್ ಮೌರ್ಯ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. ಎಲೆಕ್ಟ್ರಾನಿಕ್ ಮತಯಂತ್ರಗಳಲ್ಲಿ ದೋಷವಿದೆಯೆಂದು ಆರೋಪಿಸಿ ಮಾಯಾವತಿ ನ್ಯಾಯಾಲಯದ ಮೊರೆ ಹೋಗುವ ಮುನ್ನ ಆಸ್ಪತ್ರೆಗೆ ಹೋಗಿ ಸೂಕ್ತ ಚಿಕಿತ್ಸೆ ಪಡೆಯಲಿ ಎಂದು ಸಲಹೆ ನೀಡಿದ್ದಾರೆ.

ಮಾಯಾವತಿ ಕೋರ್ಟ್ ಗೆ ಹೋದರೆ ನಾವು ಹೆದರುವುದಿಲ್ಲ, ಆದರೆ ಅದಕ್ಕೂ ಮುನ್ನ ಆಕೆ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆಯಬೇಕು, ಆಕೆಗೆ ಈಗ ವಿಶ್ರಾಂತಿಯ ಅಗತ್ಯವಿದೆ ಎಂದು ಕೆಶವ ಪ್ರಸಾದ್ ಮೌರ್ಯ ಹೇಳಿದರು.

ಚುನಾವಣೆಯಲ್ಲಿ ಬಿ.ಎಸ್.ಪಿ ಹೀನಾಯ ಸೋಲು ಅನುಭವಿಸಿದ ನಂತರ ಮತಯಂತ್ರಗಳಲ್ಲಿ ದೋಷವಿದೆ, ಯಾವುದೇ ಪಕ್ಷಕ್ಕೆ ಮತ ಹಾಕಿದರೂ ಅದು ಬಿಜೆಪಿ ಅಭ್ಯರ್ಥಿಗಳಿಗೆ ಹೋಗಿವೆ ಎಂದು ಮಾಯಾವತಿ ಆರೋಪಿಸಿದ್ದರು.