ಟಿಪ್ಪು ಜಯಂತಿ ವಿರೋಧಿಸಿ ಬಿಜೆಪಿಯಿಂದ ನವೆಂಬರ್ 8 ರಂದು ರಾಜ್ಯಾದ್ಯಂತ ಪ್ರತಿಭಟನೆ

ಬೆಂಗಳೂರು: ಸರ್ಕಾರ ಆಚರಿಸಲು ಉದ್ದೇಶಿಸಿರುವ ಟಿಪ್ಪು ಜಯಂತಿಯನ್ನು ನಿಲ್ಲಿಸಬೇಕು, ಕೆಎಫ್‌ಡಿ, ಎಸ್‌ಡಿಪಿಐ ಮತ್ತು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಗಳನ್ನು ನಿಷೇಧಿಸಬೇಕು. ಇದರ ಜೊತೆಗೆ ರಾಜ್ಯದಲ್ಲಿ ಎರಡೂವರೆ ವರ್ಷಗಳಲ್ಲಿ ನಡೆದಿರುವ ಮತ್ತು ಸಂಘ ಪರಿವಾರಗಳ ಕಾರ್ಯಕರ್ತರ ಹತ್ಯೆಯ ಪ್ರಕರಣಗಳನ್ನು ರಾಷ್ಟ್ರೀಯ ತನಿಖಾ ತಂಡ(ಎನ್ಐಎ)ಕ್ಕೆ ಒಪ್ಪಿಸಬೇಕು ಎಂದು ಒತ್ತಾಯಿಸಿ ನವೆಂಬರ್ 8 ರಂದು ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ನೀಡಿದೆ.

ಬಿಜೆಪಿಯ ಎಲ್ಲಾ ಜಿಲ್ಲಾ ಘಟಕಗಳೂ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದು, ಪ್ರತಿಭಟನೆಯಲ್ಲಿ ಪ್ರತಿ ಜಿಲ್ಲೆಯಲ್ಲಿ ಕನಿಷ್ಟ ಸಾವಿರ ಜನ ಪಾಲ್ಗೊಳ್ಳುವಂತೆ ಕಾರ್ಯಕರ್ತರಿಗೆ ಸೂಚಿಸಿದೆ.

Related News

loading...
Comments (wait until it loads)
Loading...
class="clear">

News Mirchi is Stephen Fry proof thanks to caching by WP Super Cache