ಟಿಪ್ಪು ಜಯಂತಿ ವಿರೋಧಿಸಿ ಪ್ರತಿಭಟನೆ, ರಾಜ್ಯ ಸರ್ಕಾರಿ ಬಸ್ ಮೇಲೆ ಕಲ್ಲು ತೂರಾಟ – News Mirchi

ಟಿಪ್ಪು ಜಯಂತಿ ವಿರೋಧಿಸಿ ಪ್ರತಿಭಟನೆ, ರಾಜ್ಯ ಸರ್ಕಾರಿ ಬಸ್ ಮೇಲೆ ಕಲ್ಲು ತೂರಾಟ

ವಿರೋಧಗಳನ್ನು ಲೆಕ್ಕಿಸಿದೆ ಟಿಪ್ಪು ಜಯಂತಿಯನ್ನು ನಡೆಸುವ ಹಠಕ್ಕೆ ಬಿದ್ದಿರುವ ರಾಜ್ಯ ಸರ್ಕಾರದ ಕ್ರಮಕ್ಕೆ ಆಕ್ರೋಶ ವ್ಯಕ್ತವಾಗುತ್ತಿದೆ. ಸರ್ಕಾರದ ತೀರ್ಮಾನವನ್ನು ವಿರೋಧಿಸ ಪ್ರತಿಭಟನೆಗಳು ನಡೆಯುತ್ತಿವೆ. ಮಡಿಕೇರಿಯಲ್ಲಿ ಬಿಜೆಪಿ ಕರೆ ನೀಡಿದ ಬಂದ್ ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ವಾಣಿಜ್ಯ ಮಳಿಗೆಗಳು ಮುಚ್ಚಲ್ಪಟ್ಟಿದ್ದವು. ಕೆಎಸ್ಆರ್ಟಿಸಿ ಬಸ್ ಮೇಲೆ ಕೆಲ ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿ ಗಾಜು ಪುಡಿ ಪುಡಿ ಮಾಡಿದ್ದಾರೆ. ಶುಕ್ರವಾರ ಬೆಳಗ್ಗೆ 8 ಗಂಟೆ ವೇಳೆಯಲ್ಲಿ ಈ ದಾಳಿ ನಡೆದಿದೆ ಎಂದು ಕೆ.ಎಸ್.ಆರ್.ಟಿ.ಸಿ ಅಧಿಕಾರಿಗಳು ಹೇಳಿದ್ದಾರೆ.

ಸರ್ಕಾರದ ವಿವಾದಿತ ತೀರ್ಮಾನವನ್ನು ವಿರೋಧಿಸಿ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು. ಮಡಿಕೇರಿ ಶಾಸಕ ಅಪ್ಪಚ್ಚು ರಂಜನ್ ಮತ್ತು ವಿಧಾನ ಪರಿಷತ್ ಸದಸ್ಯ ಸುನಿಲ್ ಸಬ್ರಮಣಿಯವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಟಿಪ್ಪು ಜಯಂತಿ ಹಿನ್ನೆಲೆಯಲ್ಲಿ ಈ ಭಾಗದಲ್ಲಿ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಟಿಪ್ಪು ಜಯಂತಿ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಸೂಕ್ಷ್ಮ ಪ್ರದೇಶಗಳಲ್ಲಿ ಭಾರೀ ಪ್ರಮಾಣದಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ. ಟಿಪ್ಪು ಜಯಂತಿ ವಿರೋಧಿಸಿ ನಡೆಸುವ ಪ್ರತಿಭಟನೆಗಳಿ ಅನುಮತಿ ನೀಡುವುದಿಲ್ಲ ಎಂದು ಸರ್ಕಾರವೂ ಸ್ಪಷ್ಟಪಡಿಸಿದ್ದು, ರಾಜ್ಯ ಸರ್ಕಾರದ ನೇತೃತ್ವದಲ್ಲಿ ನಡೆಯುವ ಕಾರ್ಯಕ್ರಮಗಳಿಗೆ ಮಾತ್ರ ಅನುಮತಿ ಇರುತ್ತದೆ ಎಂದು ಹೇಳಿದೆ.

Get Latest updates on WhatsApp. Send ‘Add Me’ to 8550851559

Click for More Interesting News

Loading...
error: Content is protected !!