ಟಿಎಂಸಿ ಕಾರ್ಯಕರ್ತರಿಂದ ಕೇಂದ್ರ ಸಚಿವರ ಮನೆ ಮೇಲೆ ದಾಳಿ

ತೃಣಮೂಲ ಕಾಂಗ್ರೆಸ್ ಸಂಸದ ಸುದೀಪ್ ಬಂಡೋಪಾಧ್ಯಾಯ ರವರನ್ನು ರೋಸ್ ವ್ಯಾಲಿ ಚಿಟ್ ಫಂಡ್ ಹಗರಣ ಸಂಬಂಧ ಸಿಬಿಐ ಬಂಧಿಸಿದ ನಂತರ, ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರು ಕೊಲ್ಕತಾದಲ್ಲಿರುವ ಕೇಂದ್ರ ಸಚಿವ ಬಾಬುಲ್ ಸುಪ್ರಿಯೋ ಮನೆ ಮೇಲೆ ದಾಳಿ ನಡೆಸಿದ್ದಾರೆ.

ಕೇಂದ್ರ ಸಚಿವರ ತಂದೆ ತಾಯಿ ವಾಸಿಸುತ್ತಿರುವ ಮನೆ ಮುಂದೆ ಪ್ರತಿಭಟನೆ ನಡೆಸಿದ ತೃ.ಮೂ.ಕಾಂಗ್ರೆಸ್ ಕಾರ್ಯಕರ್ತರು, ತಡೆಯಲು ಬಂದ ಪೊಲೀಸರೊಂದಿಗೆ ಘರ್ಷಣೆಗೆ ಇಳಿದರು.

ಟಿಎಂಸಿ ಕಾರ್ಯಕರ್ತರು ತಮ್ಮ ಪೋಷಕರ ಮನೆ ಮುಂದೆ ಪ್ರತಿಭಟನೆ ಮಾಡುತ್ತಿರುವ ಕುರಿತು ಪ್ರತಿಕ್ರಿಯಿಸಿರುವ ಸುಪ್ರಿಯೋ, “ಟಿಎಂಸಿ ಗೂಂಡಾಗಳು ನನ್ನ ತಂದೆತಾಯಿ ವಾಸವಿರುವ ಅಪಾರ್ಟ್ ಮೆಂಟ್ ಗೇಟು ಒಡೆಯಲು ಪ್ರಯತ್ನಿಸುತ್ತಿದ್ದಾರೆ, ಇದು ನಾಚಿಕೆಗೇಡು ಎಂದು ಟ್ವೀಟ್ ಮಾಡಿದ್ದಾರೆ.

ಟಿಎಂಸಿ ಕಾರ್ಯಕರ್ತರು ನಮ್ಮ ಮನೆ ಮೇಲೆ ದಾಳಿ ನಡೆಸಿದರು, ಪೊಲೀಸರೇನು ಮಾಡುತ್ತಿದ್ದಾರೆ? ಅಪಾರ್ಟ್ ಮೆಂಟ್ ನಲ್ಲಿ ವಾಸಿಸುತ್ತಿರುವವರಿಗೆ ರಕ್ಷಣೆ ನೀಡುವ ಜವಾಬ್ದಾರಿ ಅವರಿಗಿಲ್ಲವೇ? ಎಂದು ಪ್ರಶ್ನಿಸಿದ್ದಾರೆ.

Loading...

Leave a Reply

Your email address will not be published.

error: Content is protected !!