ತನ್ನದೇ ಪಕ್ಷದಿಂದ ಮಮತಾ ಬ್ಯಾನರ್ಜಿಗೆ ಮುಖಭಂಗ, 6 ಶಾಸಕರು ಜಂಪ್? – News Mirchi

ತನ್ನದೇ ಪಕ್ಷದಿಂದ ಮಮತಾ ಬ್ಯಾನರ್ಜಿಗೆ ಮುಖಭಂಗ, 6 ಶಾಸಕರು ಜಂಪ್?

ಪಶ್ಚಿಮ ಬಂಗಾಳ ಮುಖ್ಯಮಂತ್ರಿ, ತೃಣಮೂಲ ಕಾಂಗ್ರೆಸ್ ಪಕ್ಷದ ನಾಯಕಿ ಮಮತಾ ಬ್ಯಾನರ್ಜಿ ತ್ರಿಪುರದಲ್ಲಿ ತನ್ನದೇ ಪಕ್ಷದ ಶಾಸಕರಿಂದ ಮುಖಭಂಗವಾಗುವ ಸಾಧ್ಯತೆಗಳಿವೆ. ತ್ರಿಪುರದ ತೃಣಮೂಲ ಕಾಂಗ್ರೆಸ್ ಬಂಡಾಯ ಶಾಸಕರು ಬಿಜೆಪಿಗೆ ಹತ್ತಿರವಾಗುತ್ತಿದ್ದಾರೆ. ತೃಣಮೂಲ ಕಾಂಗ್ರೆಸ್ ಪಕ್ಷದ ವೈಖರಿಯನ್ನು ವಿರೋಧಿಸಿ ರಾಷ್ಟ್ರಪತಿ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ರಾಮನಾಥ್ ಕೋವಿಂದ್ ಅವರನ್ನು ಬೆಂಬಲಿಸಲು ಆರು ಶಾಸಕರು ನಿರ್ಧರಿಸಿದ್ದರು. ಹೀಗಾಗಿ ಅವರ ಮೇಲೆ ಮಮತಾ ಬ್ಯಾನರ್ಜಿ ಅಮಾನತು ಶಿಕ್ಷೆ ವಿಧಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ಬಿಜೆಪಿಯಲ್ಲಿ ಸೇರಲು ಸಿದ್ಧತೆ ನಡೆಸಿದ್ದಾರೆ ಎನ್ನಲಾಗುತ್ತಿದೆ.

ರಾಷ್ಟ್ರಪತಿ ಚುನಾವಣೆಯಲ್ಲಿ ಪ್ರತಿಪಕ್ಷಗಳ ಅಭ್ಯರ್ಥಿ ಮೀರಾಕುಮಾರ್ ಗೆ ಮಮತಾ ಬ್ಯಾನರ್ಜಿ ಈಗಾಗಲೇ ಬೆಂಬಲ ವ್ಯಕ್ತಪಡಿಸಿದ್ದಾರೆ. ಇದು ತೃಣಮೂಲ ಕಾಂಗ್ರೆಸ್ ತ್ರಿಪುರ ಶಾಖೆಯಲ್ಲಿ ಬಿರುಕು ಮೂಡಲು ಕಾರಣವಾಗಿದೆ.

ತ್ರಿಪುರದಲ್ಲಿ ತಮಗೆ ಕಡುವಿರೋಧಿಯಾಗಿರುವ ಸಿಪಿಎಂ ಪಕ್ಷ ಬೆಂಬಲ ನೀಡಿರುವ ಮೀರಾಕುಮಾರ್ ಗೆ ತಾವು ಬೆಂಬಲ ನೀಡುವುದಿಲ್ಲ ಎಂದು ತೃಣಮೂಲ ಶಾಸಕರು ಕಡ್ಡಿ ಮುರಿದಂತೆ ಹೇಳಿದ್ದಾರೆ. ಎನ್ಡಿಎ ರಾಷ್ಟ್ರಪತಿ ಅಭ್ಯರ್ಥಿ ಕೋವಿಂದ್ ಗೇ ನಮ್ಮ ಮತ ಎಂದು ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ಮೇಲೆ ಪಕ್ಷದ ನಾಯಕಿ ಮಮತಾ ಬ್ಯಾನರ್ಜಿ ಅಮಾನತು ಶಿಕ್ಷೆ ವಿಧಿಸಿದ್ದಾರೆ. ಈಗ ಆ ಶಾಸಕರು ಬಿಜೆಪಿಯಲ್ಲಿ ಸೇರಲು ಮುಂದಾಗಿದ್ದಾರಂತೆ.

Contact for any Electrical Works across Bengaluru

Loading...
error: Content is protected !!