ಮೋದಿ – ಟ್ರಂಪ್ ಮೊದಲ ಫೋನ್ ಪೇ ಚರ್ಚಾ

ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಯವರೊಂದಿಗೆ ದೂರವಾಣಿ ಮೂಲಕ ಮಾತುಕತೆ ನಡೆಯಿತು. ಡೊನಾಲ್ಡ್ ಟ್ರಂಪ್ ಅಮೆರಿಕದ 45 ನೇ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದ ನಾಲ್ಕು ದಿನಗಳ ನಂತರ ಮೋದಿಯವರಿಗೆ ಕರೆ ಮಾಡಿ ಚರ್ಚೆ ನಡೆಸಿದರು.

ಅಮೆರಿಕಾ ಅಧ್ಯಕ್ಷರು ಭಾರತದ ಪ್ರಧಾನಿ ಮೋದಿಯವರೊಂದಿಗೆ ಮಾತುಕತೆ ನಡೆಸಿದರು ಎಂದು ಶ್ವೇತಭವನದ ಮಾಧ್ಯಮ ಕಾರ್ಯದರ್ಶಿ ಹೇಳಿದ್ದು, ಚರ್ಚೆಯ ವಿವರಗಳನ್ನು ಬಹಿರಂಗಪಡಿಸಿಲ್ಲ. ಇಬ್ಬರೂ ನಾಯಕರ ನಡುವಿನ ಚರ್ಚೆ ಸುಮಾರು 30 ನಿಮಿಷಗಳ ಕಾಲ ನಡೆಯಿತು ಎನ್ನಲಾಗಿದೆ.

ಟ್ರಂಪ್ ಅಧಿಕಾರ ಸ್ವೀಕರಿಸಿದ ನಂತರ ಸಂಪರ್ಕಿಸಿದ 5 ನೇ ವಿದೇಶಿ ನಾಯಕರು ಪ್ರಧಾನಮಂತ್ರಿ ನರೇಂದ್ರ ಮೋದಿ. ಇದಕ್ಕೂ ಮೊದಲು ಕೆನಡಾ ಪ್ರಧಾನಿ ಜಸ್ಟಿನ್, ಮೆಕ್ಸಿಕೋ ಅಧ್ಯಕ್ಷ ಪೆನಾ ನೀಟೋ, ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಮತ್ತು ಈಜಿಫ್ಟ್ ಅಧ್ಯಕ್ಷ ಅಬ್ದುಲ್ ಫತಾ ಅವರೊಂದಿಗೆ ದೂರವಾಣಿ ಮೂಲಕ ಚರ್ಚೆ ನಡೆಸಿದ್ದರು.

Indian PM Narendra Modi and the new US President, Donald Trump had their first official telephonic conversation on Tuesday.

White House released a statement saying US President Donald Trump spoke to Indian Prime Minister Narendra Modi and invited him to visit the United States.