ಆರ್.ಎಸ್.ಎಸ್ ಕಾರ್ಯಕರ್ತ ಶರತ್ ಹತ್ಯೆ: ಇಬ್ಬರು ಪಿಎಫ್ಐ ಕಾರ್ಯಕರ್ತರ ಸೆರೆ |News Mirchi

ಆರ್.ಎಸ್.ಎಸ್ ಕಾರ್ಯಕರ್ತ ಶರತ್ ಹತ್ಯೆ: ಇಬ್ಬರು ಪಿಎಫ್ಐ ಕಾರ್ಯಕರ್ತರ ಸೆರೆ

ಆರ್.ಎಸ್.ಎಸ್ ಕಾರ್ಯಕರ್ತ ಶರತ್ ಮಡಿವಾಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿರುವುದಾಗಿ ಪಶ್ಚಿಮ ವಲಯದ ಐಜಿಪಿ ಹರಿಶೇಖರನ್ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ. ಇನ್ನುಳಿದ ಆರೋಪಿಗಳನ್ನೂ ಶೀಘ್ರದಲ್ಲೇ ಬಂಧಿಸುವುದಾಗಿ ಅವರು ಹೇಳಿದ್ದಾರೆ.

ಚಾಮರಾಜನಗರ ಜಿಲ್ಲೆಯ ಪಿಎಫ್ಐ ಅಧ್ಯಕ್ಷ ಖಲೀಲುಲ್ಲಾ ಮತ್ತು ಪಿಎಫ್ಐ ಸದಸ್ಯ ಅಬ್ದುಲ್ ಶಾಜಿ ಬಂಧಿತರು.

  • No items.

ಆರ್.ಎಸ್.ಎಸ್ ಕಾರ್ಯಕರ್ತರಾಗಿದ್ದ 28 ವರ್ಷದ ಶರತ್ ಅವರನ್ನು ದುಷ್ಕರ್ಮಿಗಳು ಜುಲೈ 4 ರಂದು ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಪರಾರಿಯಾಗಿದ್ದರು. ಗಂಭೀರವಾಗಿ ಗಾಯಗೊಂಡ ಶರತ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಮೂರು ದಿನ ಸಾವು ಬದುಕಿನ ನಡುವೆ ಹೋರಾಡಿದ ಶರತ್ ಚಿಕಿತ್ಸೆ ಫಲಕಾರಿಯಾಗದೆ ಜುಲೈ 8 ರಂದು ಸಾವನ್ನಪ್ಪಿದ್ದರು.

Loading...
loading...
error: Content is protected !!