ನೂನತ ಉಪರಾಷ್ಟ್ರಪತಿಯಾಗಿ ವೆಂಕಯ್ಯನಾಯ್ಡು ಪ್ರಮಾಣವಚನ

View Later

ನವದೆಹಲಿ: ದೇಶದ ಎರಡನೇ ಅತ್ಯುನ್ನತ ಸಾಂವಿಧಾನಿಕ ಹುದ್ದೆಯಾದ ಉಪರಾಷ್ಟ್ರಪತಿಯಾಗಿ ಎಂ. ವೆಂಕಯ್ಯನಾಯ್ಡು ರವರು ಇಂದು ಪ್ರಮಾಣವಚನ ಸ್ವೀಕರಿಸಿದರು. ರಾಷ್ಟ್ರಪತಿ ಭವನದ ದರ್ಬಾರ್ ಹಾಲ್ ನಲ್ಲಿ ಶುಕ್ರವಾರ ಬೆಳಗ್ಗೆ ಭಾರತದ 13ನೇ ಉಪರಾಷ್ಟ್ರಪತಿಯಾಗಿ ಅವರು ಪ್ರಮಾಣವಚನ ಸ್ವೀಕರಿಸಿದರು. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ವೆಂಕಯ್ಯನಾಯ್ಡು ರವರಿಗೆ ಪ್ರಮಾಣವಚನ ಬೋಧಿಸಿದರು.

ಉಪರಾಷ್ಟ್ರಪತಿಯಾಗಿ ಪ್ರಮಾಣವಚನ ಸ್ವೀಕರಿಸಿದ ವೆಂಕಯ್ಯನಾಯ್ಡು ರವರಿಗೆ ಮೊದಲು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಅಭಿನಂದಿಸಿದರು. ಮೊದಲ ಸಾಲಿನಲ್ಲಿ ಕೂತಿದ್ದ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವರು, ನೂತನ ಉಪರಾಷ್ಟ್ರಪತಿಯವರಿಗೆ ನಮಸ್ಕಾರ ಮಾಡಿದರು. 10 ನಿಮಿಷಗಳ ಕಾಲ ನಡೆದ ಈ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಲೋಕಸಭೆ ಸ್ಪೀಕರ್ ಸುಮಿತ್ರಾ ಮಹಾಜನ್, ಪ್ರತಿಪಕ್ಷಗಳ ಪ್ರಮುಖ ನಾಯಕರು, ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು, ಹಲವು ದೇಶಗಳ ರಾಯಭಾರಿಗಳು ಪಾಲ್ಗೊಂಡಿದ್ದರು.

ಪ್ರಮಾಣವಚನ ಸ್ವೀಕಾರಕ್ಕೂ ಮುನ್ನ ರಾಜ್ ಘಾಟ್ ಗೆ ತೆರಳಿದ ವೆಂಕಯ್ಯನಾಯ್ಡು, ರಾಷ್ಟ್ರಪತಿ ಮಹಾತ್ಮಾ ಗಾಂಧಿ ವಿಗ್ರಹಕ್ಕೆ ನಮನ ಸಲ್ಲಿಸಿದರು. ನಂತರ ಸರ್ದಾರ್ ವಲ್ಲಭಾಯಿ ಪಟೇಲ್, ದೀನ್ ದಯಾಳ್ ಉಪಾಧ್ಯಾಯ ರವರ ಪ್ರತಿಮೆಗಳಿಗೂ ಪುಷ್ಪ ನಮನ ಸಲ್ಲಿಸಿದರು.