ನಂಬಿಕೆಯ ಹೆಸರಲ್ಲಿ ಹಿಂಸಾಚಾರ ಸಹಿಸುವುದಿಲ್ಲ – News Mirchi

ನಂಬಿಕೆಯ ಹೆಸರಲ್ಲಿ ಹಿಂಸಾಚಾರ ಸಹಿಸುವುದಿಲ್ಲ

ಅತ್ಯಾಚಾರ ಪ್ರಕರಣದಲ್ಲಿ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮಿತ್ ರಾಮ್ ರಾಹೀಂ ಸಿಂಗ್ ಅಪರಾಧಿ ಎಂದು ಕೋರ್ಟ್ ತೀರ್ಪು ನೀಡಿದ ಬೆನ್ನಲ್ಲೇ ಉದ್ಭವಿಸಿದ ಹಿಂಸಾಚಾರವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಖಂಡಿಸಿದ್ದಾರೆ. ನಂಬಿಕೆಯ ಹೆಸರಿನಲ್ಲಿ ಹಿಂಸಾಚಾರವನ್ನು ನಡೆಸುವ ಹಕ್ಕು ಯಾರಿಗೂ ಇಲ್ಲ. ರಾಜಕೀಯ, ಧರ್ಮ ಮತ್ತು ವೈಯಕ್ತಿಕ ನಂಬಿಕೆಗಳ ಆಧಾರದಲ್ಲಿ ದಾಳಿಗೆ ಇಳಿಯುವುದನ್ನು ಸಹಿಸುವುದಿಲ್ಲ. ಕಾನೂನನ್ನು ಕೈಗೆ ತೆಗೆದುಕೊಳ್ಳುವ ಯಾರನ್ನೂ ಬಿಡುವುದಿಲ್ಲ ಎಂದು ಮೋದಿ ಎಚ್ಚರಿಕೆ ನೀಡಿದರು.

ಮನ್ ಕೀ ಬಾತ್ ರೇಡಿಯೋ ಕಾರ್ಯಕ್ರಮದಲ್ಲಿ ದೇಶವನ್ನುದ್ದೇಶಿಸಿ ಮಾತನಾಡಿದ ಮೋದಿ, ಹಬ್ಬದ ಸಂದರ್ಭದಲ್ಲಿ ಹಿಂಸಾಚಾರ ನಡೆದಿರುವುದು ಜನರಲ್ಲಿ ಆತಂಕ ಸೃಷ್ಟಿಸಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಕಾನೂನಿಗೆ ಎಲ್ಲರೂ ತಲೆಬಾಗಬೇಕು, ಕಾನೂನು ತನ್ನ ಕೆಲಸವನ್ನು ನಿರ್ವಹಿಸುತ್ತದೆ. ತಪ್ಪು ಮಾಡಿದವರು ಶಿಕ್ಷೆ ಅನುಭವಿಸುತ್ತಾರೆ. ಯಾವುದೇ ದೇಶವಾಗಲೀ, ಸರ್ಕಾರವಾಗಲಿ ಕಾನೂನನ್ನು ಕೈಗೆತ್ತಿಕೊಳ್ಳುವುದನ್ನು ಸಹಿಸುವುದಿಲ್ಲ ಎಂದು ಮೋದಿ ಹೇಳಿದರು.

ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ತಪ್ಪಿತಸ್ಥ ಎಂದು ಸಿಬಿಐ ನ್ಯಾಯಾಲಯ ತೀರ್ಪು ನೀಡಿದ ಬೆನ್ನಲ್ಲೇ, ಹರಿಯಾಣ ಮತ್ತು ಪಂಜಾಬ್ ರಾಜ್ಯಗಳಲ್ಲಿ ಗುರ್ಮೀತ್ ಬೆಂಬಲಿಗರು ಹಿಂಸಾಚಾರಕ್ಕಿಳಿದಿದ್ದು, ಹಲವರು ಈ ಹಿಂಸಾಚಾರದಲ್ಲಿ ಸಾವನ್ನಪ್ಪಿದ್ದರು. ಈ ಹಿನ್ನೆಲೆಯಲ್ಲಿ ಪ್ರಧಾನಿ ಈ ಕುರಿತು ಪ್ರತಿಕ್ರಿಯಿಸಿದ್ದಾರೆ.

Loading...