ಇಂದು 11 ಗಂಟೆಗೆ ಚಿಕ್ಕಬಳ್ಳಾಪುರ ಶಾಸಕ ಡಾ. ಸುಧಾಕರ ರೆಡ್ಡಿ ರಾಜೀನಾಮೆ? – News Mirchi

ಇಂದು 11 ಗಂಟೆಗೆ ಚಿಕ್ಕಬಳ್ಳಾಪುರ ಶಾಸಕ ಡಾ. ಸುಧಾಕರ ರೆಡ್ಡಿ ರಾಜೀನಾಮೆ?

ಚಿಕ್ಕಬಳ್ಳಾಪುರ ಶಾಸಕ ಕೆ.ಸುಧಾಕರ ರೆಡ್ಡಿ ಅವರು ಇಂದು ಬೆಳಗ್ಗೆ 11 ಗಂಟೆಗೆ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದ್ದಾರೆ. ಈ ಕುರಿತು ಟ್ವಿಟರ್ ನಲ್ಲಿ ಪ್ರಕಟಿಸಿದ್ದು, ಪಕ್ಷಕ್ಕೂ ರಾಜೀನಾಮೆ ನೀಡುತ್ತಾರಾ ಎಂಬ ವಿಷಯ ತಿಳಿದು ಬಂದಿಲ್ಲ.

ಚಿಕ್ಕಬಳ್ಳಾಪುರ ಸಂಸದ ವೀರಪ್ಪ ಮೊಯಿಲಿ ಜೊತೆಗೆ ಇರುವ ಭಿನ್ನಾಭಿಪ್ರಾಯಗಳು ಅವರು ಈ ತೀರ್ಮಾನಕ್ಕೆ ಬರಲು ಕಾರಣವೆನ್ನಲಾಗುತ್ತಿದೆ. ಸುಧಾಕರ ರೆಡ್ಡಿ ಅವರ ಈ ತೀರ್ಮಾನ ಹೊರ ಬೀಳುತ್ತಿದ್ದಂತೆ, ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯ್ತಿ ಅಧ್ಯಕ್ಷರಾಗಿರುವ ಸುಧಾಕರ ರೆಡ್ಡಿಯವರ ತಂದೆ ಕೇಶವರೆಡ್ಡಿ ಅವರೂ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ.

ಕೆಪಿಸಿಸಿ ಅಧ್ಯ್ಕಷ ಜಿ.ಪರಮೇಶ್ವರ್ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲೆಯಲ್ಲಿನ ಪಕ್ಷದ ವಿವಿಧ ಸಮಸ್ಯೆಗಳ ಕುರಿತು ಚರ್ಚಿಸಲು ಪಾಲ್ಗೊಂಡಿದ್ದ ಸಭೆಯಲ್ಲಿ ಹಲವು ನಾಯಕರು ಸುಧಾಕರರೆಡ್ಡಿ ಅವರ ತಂದೆ, ಜಿಲ್ಲಾ ಪಂಚಾಯ್ತಿ ಅಧ್ಯಕ್ಷರೂ ಆಗಿರುವ ಕೇಶವರೆಡ್ಡಿ ಅವರನ್ನು ಪದಚ್ಯುತಗೊಳಿಸಲು ಒತ್ತಾಯಿಸಿದ್ದಾರೆ ಎನ್ನಲಾಗಿದೆ.

ಈ ಹಿನ್ನೆಲೆಯಲ್ಲೇ ಶಾಸಕರು ಕಾಂಗ್ರೆಸ್ ನಾಯಕರಿಗೆ ಪಕ್ಷ ಬಿಡುವ ಎಚ್ಚರಿಕೆ ನೀಡಿದ್ದಾರೆ. ಶುಕ್ರವಾರ 11 ಗಂಟೆಗೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದು, ಪಕ್ಷ ಬಿಡದಂತೆ ಅವರ ಓಲೈಕೆಗೂ ಪಕ್ಷದ ಕೆಲ ಮುಖಂಡರಿಂದ ಕಸರತ್ತು ಆರಂಭವಾಗಿದೆ.

Loading...