ಕಾಂಗ್ರೆಸ್ ನಿಂದ ಪ್ರಧಾನಿ ಅಭ್ಯರ್ಥಿಯಾಗಲು ನಾನು ಸಿದ್ಧ – News Mirchi

ಕಾಂಗ್ರೆಸ್ ನಿಂದ ಪ್ರಧಾನಿ ಅಭ್ಯರ್ಥಿಯಾಗಲು ನಾನು ಸಿದ್ಧ

ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಪ್ರಧಾನಿ ಅಭ್ಯರ್ಥಿಯಾಗಲು ಸಿದ್ಧನಿದ್ದೇನೆ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಸ್ಪಷ್ಟಪಡಿಸಿದ್ದಾರೆ. ಎರಡು ವಾರಗಳ ಅಮೆರಿಕ ಪ್ರವಾಸದ ಭಾಗವಾಗಿ ಕ್ಯಾಲಿಫೋರ್ನಿಯಾ ಯೂನಿವರ್ಸಿಟಿಯಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತಿದ್ದ ಅವರು ಈ ವಿಷಯ ಹೇಳಿದ್ದಾರೆ.

ರಾಹುಲ್ ಭಾಷಣ ಮಾಡುತ್ತಿದ್ದಾಗ ವ್ಯಕ್ತಿಯೊಬ್ಬರು ನೀವು ಕಾಂಗ್ರೆಸ್ ನಿಂದ ಪ್ರಧಾನಿ ಅಭ್ಯರ್ಥಿಯಾಗಿ 2019 ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಸಿದ್ಧರಿದ್ದೀರಾ ಎಂದು ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿ ರಾಹುಲ್, ಖಂಡಿತ ನಾನು ಅದಕ್ಕೆ ಸಿದ್ಧವಾಗಿರುತ್ತೇನೆ, ನಮ್ಮದು ಸಂಘಟನಾತ್ಮಕ ಪಕ್ಷವಾಗಿದೆ. ಆದ್ದರಿಂದ ಈ ವಿಷಯವನ್ನು ಪಕ್ಷ ತೀರ್ಮಾನಿಸುತ್ತದೆ. ಪಕ್ಷ ಸದ್ಯ ಈ ವಿಷಯದ ಕುರಿತೇ ಕಾರ್ಯೋನ್ಮುಖವಾಗಿದೆ. ಕಾಂಗ್ರೆಸ್ ಪಕ್ಷ ಈ ವಿಷಯಕ್ಕೆ ಸಂಬಂಧಿಸಿದಂತೆ ತೀರ್ಮಾನಿಸುತ್ತದೆ ಎಂದು ರಾಹುಲ್ ಹೇಳಿದರು. ಕೆಲ ಕಾರಣಗಳಿಂದ ಹಿಂದೆ ಕೆಲ ತಪ್ಪಾಗಿದೆ. ಮುಂದೆ ಹಾಗಾಗದಂತೆ ನೋಡಿಕೊಳ್ಳುತ್ತೇವೆ ಎಂದು ಹೇಳಿದರು.

Get Latest updates on WhatsApp. Send ‘Add Me’ to 8550851559

Loading...