ಈಶ್ವರನ ಹೆಸರಲ್ಲಿ ಆದಿತ್ಯನಾಥ್ ಪ್ರಮಾಣವಚನ ಸ್ವೀಕಾರ – News Mirchi
We are updating the website...

ಈಶ್ವರನ ಹೆಸರಲ್ಲಿ ಆದಿತ್ಯನಾಥ್ ಪ್ರಮಾಣವಚನ ಸ್ವೀಕಾರ

ಉತ್ತರಪ್ರದೇಶದ 21 ನೆಯ ಮುಖ್ಯಮಂತ್ರಿಯಾಗಿ ಯೋಗಿ ಆದಿತ್ಯನಾಥ್ ಭಾನುವಾರ ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲ ರಾಮ್ ನಾಯಕ್ ಅದಿತ್ಯನಾಥ್ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಈಶ್ವರನ ಹೆಸರಿನಲ್ಲಿ ಯೋಗಿ ಅದಿತ್ಯನಾಥ್ ಪ್ರಮಾಣವಚನ ಸ್ವೀಕರಿಸಿದರು. ಉಪಮುಖ್ಯಮಂತ್ರಿಗಳಾಗಿ ಕೇಶವ್ ಪ್ರಸಾದ್ ಮೌರ್ಯ ಮತ್ತು ದಿನೇಶ್ ಶರ್ಮಾ ಪ್ರಮಾಣ ವಚನ ಸ್ವೀಕರಿಸಿದರು.

ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಹಿರಿಯ ನಾಯಕರಾದ ಎಲ್.ಕೆ.ಅಡ್ವಾಣಿ, ಮುರಳಿ ಮನೋಹರ ಜೋಷಿ, ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ಸಮಾಜವಾದಿ ಪಕ್ಷದ ಮುಖಂಡ ಮುಲಾಯಂಸಿಂಗ್ ಯಾದವ್ ಮತ್ತು ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಮುಂತಾದವರು ಭಾಗವಹಿಸಿದ್ದರು.

Contact for any Electrical Works across Bengaluru

Loading...

Leave a Reply

Your email address will not be published.

error: Content is protected !!